ಕೆಬಿ ಚಂದ್ರ ಶೇಖರ್
ಕೆಬಿ ಚಂದ್ರ ಶೇಖರ್

ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ: ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಹೋದರರ ವಿರುದ್ಧ ಎಫ್ಐಆರ್

ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟ್ ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಕೆ,ಆರ್ ಪೇಟೆ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಅವರ ಸಹೋದರರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
Published on

ಮಂಡ್ಯ: ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟ್ ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಕೆ,ಆರ್ ಪೇಟೆ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಅವರ ಸಹೋದರರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಕೃಷ್ಣರಾಜಪೇಟೆ ಪಟ್ಟಣದ ಟೌನ್ ಕ್ಲಬ್ ನಲ್ಲಿ ನೂತನ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿ ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟರ್ ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂಧಿಸಿ ಅವಮಾನಿಸಿದ್ದಾರೆ. ನಂತರ  ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪದ ಮೇಲೆ  ಎಫ್ ಐ ಆರ್ ದಾಖಲಿಸಲಾಗಿದೆ.

ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಬಿ.ಈಶ್ವರ ಪ್ರಸಾದ್ ಮತ್ತು ಪಿಎಲ್ ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಕೆ.ಬಿ.ರವಿ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಆರೋಪದ ಮೇಲೆ ಪಟ್ಟಣ ಪೋಲಿಸ್ ಠಾಣೆಯ  ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಎಸ್ ಐ ಪ್ರಕರಣ ದಾಖಲಿಸಿಕೊಂಡಿದ್ದಾರೆ.

X

Advertisement

X
Kannada Prabha
www.kannadaprabha.com