ಹೊಸಪೇಟೆ: ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿಶ್ವವಿಖ್ಯಾತ ತುಂಗಾರತಿಗೆ ತುಂಗಭದ್ರ ನದಿ ದಡ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಜನವರಿ 10 ಮತ್ತು 11ರಂದು ನಡೆಯಲಿರುವ ಹಂಪಿ ಉತ್ಸವದ ನಿಮಿತ್ತ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಎಡ ಬಾಗದಲ್ಲಿರುವ ತುಂಗಭದ್ರ ನದಿ ತೀರದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ಸಂಜೆ ಆರು ಗಂಟೆ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಮತ್ತು ಶಾಸಕ ಆನಂದ್ ಸಿಂಗ್ ಸೇರಿದಂತೆ ಹಲವು ಗಣ್ಯಮಾನ್ಯರು ಬಾಗಿಯಾಗಿ ತುಂಗಭದ್ರ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ.
ಇನ್ನುಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆ ಮಾಡಲಿದ್ದು, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.
Advertisement