

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ಮಧ್ನಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಸೇರಿ ಒಟ್ಟು 50 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ .