ಸೋಮಶೇಖರ್ ರೆಡ್ಡಿ
ರಾಜ್ಯ
ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ದೂರು ದಾಖಲು
ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ನಡೆದ ಪ್ರದರ್ಶನ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.
ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ನಡೆದ ಪ್ರದರ್ಶನ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.
ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಹಿರಿಯ ವಕೀಲ ಅನೀಸ್ ಪಾಷಾ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಸಕರನ್ನು ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ದಾವಣಗೆರೆ ನಗರದ ಬಡಾವಣೆ ಠಾಣೆಯಲ್ಲಿ ಸೋಮಶೇಖರ್ ರೆಡ್ಡಿ ಅವರ ವಿರುದ್ಧ ದೂರು ದಾಖಲಾಗಿದೆ.

