ಶೇ.16 ಮೀಸಲಾತಿಗೆ ಮನವಿ: ವೀರಶೈವ-ಲಿಂಗಾಯತ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ

ವೀರಶೈವರು ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ' ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವೀರಶೈವರು ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ' ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿದೆ.

ಮಿಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ 1992 ರಲ್ಲಿಯೇ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಯಾವುದೇ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಮನವರಿಕೆಯಾದರೆ, ಅಂತಹ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡಲು ಅವಕಾಶವಿದೆ. ಹೀಗಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದ ವೀರಶೈವ ಲಿಂಗಾಯತ ಸಮುದಾಯ ಈಗ ಶೇ.16 ರಷ್ಟು ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.

ತಮಿಳುನಾಡು, ಹರ್ಯಾಣ, ಜಾರ್ಖಂಡ್ ಹಾಗೂ ಮಹಾರಾಷ್ಟ್ರ ರಾಜ್ಯಗಳು ಸ್ಥಳೀಯವಾಗಿ ಹಿಂದುಳಿದ ಸಮುದಾಯಗಳಿಗೆ ಶೇ.10 ರಿಂದ 16 ವರೆಗೂ ಮೀಸಲಾತಿ ನೀಡಿವೆ.

ಈಗ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಪರಿಗಣಿಸಿ ಶೇ.16 ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಸಮಸ್ತ ಲಿಂಗಾಯತ ಮೀಸಲಾತಿ ಹೋರಾಟ ಸಮಿತಿ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com