ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಯುವಕನ ಕೊಲೆಗೆ ಯತ್ನಿಸಿ, ಪರಾರಿಯಾದ ದುಷ್ಕರ್ಮಿಗಳು

ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಬೈಕ್ ಮೇಲೆ  ಮನೆಗೆ ತೆರಳುತ್ತಿದ್ದ ಯುವಕನೋರ್ವನಿಗೆ ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿರುವ  ಘಟನೆ ನಗರದ ಪಿಎನ್ ಟಿ ಕ್ವಾಟರ್ಸ್  ಬಳಿ ಸೋಮವಾರ ರಾತ್ರಿ ನಡೆದಿದೆ.
Published on

ಕಲಬುರಗಿ: ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಬೈಕ್ ಮೇಲೆ  ಮನೆಗೆ ತೆರಳುತ್ತಿದ್ದ ಯುವಕನೋರ್ವನಿಗೆ ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿರುವ  ಘಟನೆ ನಗರದ ಪಿಎನ್ ಟಿ ಕ್ವಾಟರ್ಸ್  ಬಳಿ ಸೋಮವಾರ ರಾತ್ರಿ ನಡೆದಿದೆ.

ರೆಹಮತ್ ನಗರದ ನಿವಾಸಿ ಇಸ್ಲಾಮುದ್ದೀನ್ ಎಂಬ ಯುವಕ ಕಳೆದ  ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ  ಮನೆಗೆ ತೆರಳುತ್ತಿದ್ದಾಗ ಪಿಎನ್ ಟಿ ಕ್ವಾಟರ್ಸ್  ಬಳಿ ಬೈಕ್ ಅಡ್ಡ ಗಟ್ಟಿದ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ಮಾಡಿ, ನಂತರ ಮಾರಕಾಸ್ತ್ರಗಳಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. 

ಸದ್ಯ ಗಾಯಾಳು ಇಸ್ಲಾಮುದ್ದೀನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆಗೆ ಯತ್ನಿಸಿದವರು ಯಾರು, ಯಾವ ಕಾರಣಕ್ಕಾಗಿ ಕೊಲೆಗೆ ಯತ್ನಿಸಲಾಗಿದೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.  ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com