ಕೇಂದ್ರ ಸರ್ಕಾರ ಕೊಟ್ಟಿರುವ ನೆರೆ ಪರಿಹಾರ ಸಾಲದು: ಸಿಎಂ ಯಡಿಯೂರಪ್ಪ
ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಸಾಕಾಗುವುದಿಲ್ಲ. ಇದೂವರೆಗೆ ಎರಡು ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಮತ್ತಷ್ಟು ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯಕ್ಕೆ ಆಗಮಿಸಿ ಹಿಂತಿರುಗಿದ ಕೂಡಲೇ ಪ್ರಧಾನಿ ಮೋದಿಯವರು ರೂ.1869 ಕೋಟಿಗಳ ನೆರವು ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಕೇಂದ್ರ ಸರ್ಕಾರ ಮತ್ತಷ್ಟು ಆರ್ಥಿಕ ನೆರವು ನೀಡಲಿದೆ ಮೊದಲು ರೂ,1,200 ಕೋಟಿ ಬಿಡುಗಡೆಯಾಗಿದ್ದು, ಈಗ 1869 ಕೋಟಿ ಬಿಡುಗಡೆ ಮಾಡಿದ್ದಾರೆ. ನೆರೆ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿಗಲಿಗೆ ಅಭಿನಂದಿಸುತ್ತೇನೆಂದು ಹೇಳಿದ್ದಾರೆ.
ಸದ್ಯಕ್ಕೆ ಬಿಡುಗಡೆ ಮಾಡಿರುವ ಹಣ ಸಾಕಾಗುವುದಿಲ್ಲ. ಮತ್ತಷ್ಟು ಹಣದ ಅಗತ್ಯವಿದೆ. ನೆರೆ ಪರಿಹಾರಕ್ಕೆ ಕೇಂದ್ರದಿಂದ ಮತ್ತಷ್ಟು ಆರ್ಥಿಕ ನೆರವು ಸದ್ಯದಲ್ಲಿಯೇ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಜೆಟ್ ಪೂರ್ವಭಾವಿ ಸಬೆ ಆರಂಭಿಸಲಾಗಿದೆ. ಉತ್ತಮ ಬಜೆಟ್ ಮಂಡನೆ ಮಾಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ