ಡಿಜಿಪಿ ಔರಾದ್ಕರ್ ಟ್ವಿಟ್ಟರ್ ಹ್ಯಾಕ್‌: ದುಷ್ಕರ್ಮಿಗಳಿಗಾಗಿ ಮುಂದುವರಿದ ಶೋಧ

ಪೊಲೀಸ್ ಗೃಹಮಂಡಳಿ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ವಿರುದ್ಧ ಬರೆದು ಟ್ವೀಟ್ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. 
ಡಿಜಿಪಿ ರಾಘವೇಂದ್ರ ಔರಾದ್ಕರ್
ಡಿಜಿಪಿ ರಾಘವೇಂದ್ರ ಔರಾದ್ಕರ್

ಬೆಂಗಳೂರು: ಪೊಲೀಸ್ ಗೃಹಮಂಡಳಿ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ವಿರುದ್ಧ ಬರೆದು ಟ್ವೀಟ್ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ರಾಘವೇಂದ್ರ ಔರಾದ್ಕರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರೂ ಅದನ್ನು ಹ್ಯಾಕ್ ಮಾಡಿ ಟ್ವೀಟ್ ಮಾಡಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಅಲ್ಲದೇ ಟ್ವಿಟರ್ ಇಂಡಿಯಾಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಘವೇಂದ್ರ ಔರಾದ್ಕರ್ ಅವರ ಟ್ವಿಟ್ಟರ್ ಖಾತೆಯಿಂದ ದೀಪಿಕಾ ಪಡುಕೋಣೆ ಅವರನ್ನು ಹಿಯಾಳಿಸುವಂತೆ ಪೋಸ್ಟ್ ಮಾಡಲಾಗಿತ್ತು. ರಾಘವೇಂದ್ರ ಔರಾದ್ಕರ್ ಅವರು ಬಹಳ ಹಿಂದೆಯೇ ತಮ್ಮ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ್ದು ಅದನ್ನು ಹ್ಯಾಕ್ ಮಾಡಿ ಟ್ವೀಟ್ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com