ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸುಂಕ ಅಧಿಕಾರಿಗಳು 63 ಲಕ್ಷ ರೂ. ಮೌಲ್ಯದ 1.575 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ವಿಮಾನ ಪ್ರಯಾಣಿಕನೊಬ್ಬನಿಂದ 336.7 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ವ್ಯಕ್ತಿಯು ಚಿನ್ನವನ್ನು ಶೂ ನ ಸಾಕ್ಸ್ ನಲ್ಲಿ ಬಚ್ಚಿಟ್ಟುಕೊಂಡಿದ್ದ. ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ 13.43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಇನ್ನೆರಡು ಪ್ರಕರಣಗಳು ಜ 7ರಂದು ನಡೆದಿದ್ದು, ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ 1,239 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪೇಸ್ಟ್ ರೂಪದಲ್ಲಿ 523 ಗ್ರಾಂ ಚಿನ್ನವನ್ನು ಕಳ್ಳಸಾಗಣೆ ಮಾಡಲು ಒಬ್ಬ ಪ್ರಯಾಣಿಕ ಪ್ರಯತ್ನಿಸಿದ್ದ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಬಂಧಿತ ಪ್ರಯಾಣಿಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
Advertisement