ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪನೆಗೆ ಸರ್ಕಾರ ಆದೇಶ

ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿಗಳನ್ನು ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸೇವಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪನೆಗೆ ಸರ್ಕಾರ ಆದೇಶ

ಬೆಂಗಳೂರು: ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿಗಳನ್ನು ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸೇವಾ ಇಲಾಖೆ ಸುತ್ತೋಲೆ ಹೊರಡಿಸಿದೆ.


ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪಿಸುವಂತೆ ಸ್ಥಳೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಆದೇಶ ನೀಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿ, ಪಂಚಾಯತ್ ಗಳು ಮತ್ತು ಇತರ ಕಚೇರಿಗಳು ಇದನ್ನು ತಕ್ಷಣದಿಂದಲೇ ಜಾರಿಗೆ ತರಬೇಕಿದೆ.


ಈ ಸಂಬಂಧ ಸ್ಥಳೀಯ ಆಯುಕ್ತರ ಕಚೇರಿಯಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದ್ದು ಇ-ಕಚೇರಿ ಜಾರಿಗೆ ತರಲು ಆಧಾರ್ ಮತ್ತು ಸಕಾಲ ಅಧಿಕಾರಿಗಳು ಸಹಾಯ ಮಾಡುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com