ಪೌರತ್ವ ಕಾಯ್ದೆ ವಿರೋಧಿಸುವುದರಲ್ಲಿ ಅರ್ಥವಿಲ್ಲ, ಮೋದಿಯವರನ್ನು ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ:ಎಸ್ ಎಲ್ ಭೈರಪ್ಪ 

ಸಾಹಿತಿಗಳಿಗೆ ಯಾವುದೇ ಅಜೆಂಡಾ ಇರಬಾರದು. ಸಾಹಿತಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು. ನಾನು ಯಾವುದೇ ಗುಂಪಿಗೆ ಸೇರಿದವನಲ್ಲ ಎಂದು ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ. 
ಪೌರತ್ವ ಕಾಯ್ದೆ ವಿರೋಧಿಸುವುದರಲ್ಲಿ ಅರ್ಥವಿಲ್ಲ, ಮೋದಿಯವರನ್ನು ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ:ಎಸ್ ಎಲ್ ಭೈರಪ್ಪ 
Updated on

ಮೈಸೂರು: ಪೌರತ್ವ ತಿದ್ದಪಡಿ ಕಾಯ್ದೆ ಮತ್ತು ಎನ್.ಆರ್.ಸಿ ವಿಚಾರದಲ್ಲಿ ಪ್ರತಿಪಕ್ಷಗಳು ಜನರಿಗೆ ಸುಳ್ಳು ಹೇಳುತ್ತಿವೆ. ಸರ್ಕಾರ ಏನೇ ಮಾಡಿದರೂ ಟೀಕಿಸುವುದೇ ಪ್ರತಿಪಕ್ಷಗಳ ಕೆಲಸವಾಗಿದೆ. ಜವಾಬ್ದಾರಿಯುತ ಪ್ರತಿಪಕ್ಷಗಳು ಸರ್ಕಾರದ ಒಳ್ಳೆಯ ಕೆಲಸಗಳನ್ನು ಮೆಚ್ಚಬೇಕು. ಜವಾಬ್ದಾರಿಯುತ ಪ್ರತಿಪಕ್ಷ ಇಲ್ಲದಿರುವುದರಿಂದ ದೇಶದಲ್ಲಿ ಈ ರೀತಿ ಆಗುತ್ತಿದೆ ಎಂದು ಹಿರಿಯ ಸಾಹಿತಿ ಡಾ.ಎಸ್ ಎಲ್ ಭೈರಪ್ಪನವರು ಆರೋಪಿಸಿದ್ದಾರೆ.


ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತಿಗಳಿಗೆ ಯಾವುದೇ ಅಜೆಂಡಾ ಇರಬಾರದು. ಸಾಹಿತಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು. ನಾನು ಯಾವುದೇ ಗುಂಪಿಗೆ ಸೇರಿದವನಲ್ಲ ಎಂದು ಸ್ಪಷ್ಟನೆ ನೀಡಿದರು.


ಅಂದು ಬ್ರಿಟಿಷರು ಧರ್ಮದ ಆಧಾರದ ಮೇಲೆ ದೇಶ ಆಳಿದರು. ಅದೇ ತಂತ್ರದ ಆಧಾರದ ಮೇಲೆ ಜವಾಹರಲಾಲ್ ನೆಹರೂ ಆಡಳಿತ ಮಾಡಿದರು. ಬ್ರಿಟಿಷರು ಹಿಂದೂಗಳನ್ನು ಜಾತಿಗಳಿಂದ ಒಡೆದಿದ್ದಾರೆ. ಹಿಂದೂಗಳಿಗೆ ಈ ದೇಶದಲ್ಲಿ ಬಹುಸಂಖ್ಯಾತತೆ ಇದೆ ಎಂದರು.
ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಪ್ರತಿಭಟನೆ ವೇಳೆ "ಫ್ರೀ ಕಾಶ್ಮೀರ' ಭಿತ್ತಿಪತ್ರ ಪ್ರದರ್ಶನ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಜೆಎನ್ ಯು ವಿವಿಯ ಗಾಳಿ ಇಲ್ಲಿಗೂ ಬೀಸಿದೆ. ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ. ಜನರ ತೆರಿಗೆ ಹಣದಿಂದ ವಿಶ್ವವಿದ್ಯಾಲಯಗಳು ನಡೆಯುತ್ತಿವೆ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಬರೀ ಪ್ರತಿಭಟನೆ ಮಾಡುತ್ತಾ ಧಿಕ್ಕಾರ ಕೂಗಿದರೆ ಏನು ಪ್ರಯೋಜನ. ವಿದ್ಯಾರ್ಥಿಗಳು ತಮಗೆ ಸರಿಯಾದ ವಿದ್ಯಾಭ್ಯಾಸ ಸಿಗುತ್ತಿದೆಯಾ ಎಂಬುದರ ಬಗ್ಗೆ ಚಿಂತೆ ಮಾಡಬೇಕು ಎಂದರು.


ಮುಸ್ಲಿಂ ಸಮುದಾಯದವರನ್ನು ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಆಗಿ ಸೃಷ್ಠಿ ಮಾಡಿದ್ದು, ಇದು ಕಾಂಗ್ರೆಸ್ ಪಕ್ಷದ ಐಡಿಯಾಲಜಿ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯನ್ನು ಬರೀ ಟೀಕೆ ಮಾಡುವುದು ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ. ಕಾಶ್ಮೀರದಲ್ಲಿ 370 ವಿಧಿಯನ್ನು ತೆಗೆದು ಹಾಕಿ, ಮೋದಿ ಧೈರ್ಯದ ಕೆಲಸ ಮಾಡಿದ್ದಾರೆ. ನರೇಂದ್ರ ಮೋದಿಯ ನಂತರ ಯಾರು ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com