ದಾಖಲಾತಿ ಹೊಂದಿರದ ಬಾಂಗ್ಲಾ ವಲಸಿಗರನ್ನು ಮುಲಾಜಿಲ್ಲದೆ ಹೊರಕಳಿಸುತ್ತೇನೆ: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಯಾವುದೇ ದಾಖಲಾತಿ ಇಲ್ಲದೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. 
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ
Updated on

ಬೆಂಗಳೂರು: ರಾಜ್ಯದಲ್ಲಿ ಯಾವುದೇ ದಾಖಲಾತಿ ಇಲ್ಲದೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಚಿತ್ರಕಲಾ ಪರಿಷತ್ತಿನಲ್ಲಿ ಛಾಯಾಗ್ರಾಹಕ ಸುದೇಶ್ ಶೆಟ್ಟಿ ಅವರ ಬಾಂಗ್ಲಾ ವಲಸಿಗರ ಕುರಿತು ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನದ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ವಾಸಿಸಿದ್ದು, ಇವರೆಲ್ಲರೂ ಜೋಪಡಿಗಳಲ್ಲಿ, ಮಾರುಕಟ್ಟೆಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದು, ಇಂತಹವರ ವಿರುದ್ಧ ಪೌರತ್ವ ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಒಂದು ವೆಳೆ ದಾಖಲಾತಿ ಹೊಂದಿರದಿದ್ದರೆ ಯಾವುದೇ ಮುಲಾಜಿಲ್ಲದೆ ಇಂತಹವರನ್ನುದೇಶದಿಂದ ಹೊರ ಹಾಕಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಪೌರತ್ವ ಕಾಯ್ದೆಯ ವಿರುದ್ಧದ ದಾಖಲಾತಿ ಹೊಂದಿರುವ ಯಾವುದೇ ಭಾರತೀಯ ಮೂಲ ಪ್ರಜೆಗಳು ಭಯ ಪಡುವ ಅಗತ್ಯವಿಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾ ದೇಶದಿಂದ ಹೊಲಸೆ ಬಂದವರಿಗೆ ಮಾತ್ರ ಈ ಕಾಯ್ದೆ ಅನ್ವಯಿಸಲಿದ್ದು, ಇದನ್ನು ರಾಜಕೀಯವಾಗಿ ಪರಿಗಣಿಸಬಾರದು ಹಾಗೂ ಇದು ದೇಶದ ಜನತೆಯ ಅಸ್ತಿತ್ವದ ಪ್ರಶ್ನೆಯಾಗಿದೆ. ಹಾಗಾಗಿ ಪೌರತ್ವ ಕಾಯ್ದೆ ಕುರಿತು ಭಾರತೀಯರು ಭಯ ಪಡುವ ಅಗತ್ಯವಿಲ್ಲ. ಆದರೆ ದಾಖಲಾತಿ ಇಲ್ಲದವರನ್ನು ಹೊರ ಕಳಿಸಲಾಗುವುದು ಎಂದು ತಿಳಿಸಿದರು.

ಪ್ರದರ್ಶನದಲ್ಲಿ ಸುಮಾರು 40ಕ್ಕಿಂತಲೂ ಹೆಚ್ಚು ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com