ಎಚ್ ಎಸ್ ದೊರೆಸ್ವಾಮಿ
ರಾಜ್ಯ
ಹಿಂದುತ್ವ ಪ್ರತಿಪಾದನೆಗೆ ಸಿಎಎ ಜಾರಿ: ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ
ಭಾರತ ದೇಶವನ್ನು ಒಡೆದು ಹಿಂದುತ್ವವನ್ನು ಪ್ರತಿಪಾದಿಸುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರು: ಭಾರತ ದೇಶವನ್ನು ಒಡೆದು ಹಿಂದುತ್ವವನ್ನು ಪ್ರತಿಪಾದಿಸುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರು ಪೂರ್ವ ತಾಲ್ಲೂಕು ಪ್ರಗತಿಪರ ಒಕ್ಕೂಟ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಕೆ.ಆರ್.ಪುರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ದೇಶದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. 2024ರ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಲು ನಿರಂತರ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.
ಸಿಎಎ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಪರ-ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ