ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಎಎ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ ಜಮೀರ್ ಇಂದು ಸೋಮಶೇಖರ್ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಯಾವುದೇ ಪ್ರತಿಭಟನೆ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು , ಆದರೆ ಈವರೆಗೂ ಜಮೀರ್ ಅಹ್ಮದ್ ಕಡೆಯವರು ಅನುಮತಿ ಪಡೆದುಕೊಂಡಿಲ್ಲಾ ಎಂಬ ಕಾರ ಣಕ್ಕೆ ಜಮೀರ್ ಅವರನ್ನು ಬಳ್ಳಾರಿ ಹೊರವಲಯದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
Advertisement