ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಬಂಧನ

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on: 

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಮೊಹಮ್ಮದ್ ರಜಾಕ್ (17) ಬಂಧಿತ ವ್ಯಕ್ತಿ. ಅವಹೇಳನಕಾರಿ ಪೋಸ್ಟ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲಿಸರ ರಜಾಕ್ ನನ್ನು ಬಂಧನಕ್ಕೊಳಪಡಿಸಿದ್ದಾರೆ. 

ವಾಟ್ಸ್ ಆ್ಯಪ್ ನಲ್ಲಿ ಮೋದಿ  ವಿರುದ್ಧ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಬಾಯ್ಸ್ ಎಂಬ ಗ್ರೂಪ್ ರಚಿಸಿದ್ದ ರಜಾಕ್, ಈ ಗ್ರೂಪ್ ಮೂಲಕ ಪಾಕಿಸ್ತಾನದ ಧ್ವಜ ವನ್ನು ಹಾಕಿದ್ದ. ಅಲ್ಲದೆ, ಗ್ರೂಪ್ ಮೂಲಕ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುತ್ತಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಬಸವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com