ಸಾಂದರ್ಭಿಕ ಚಿತ್ರ
ರಾಜ್ಯ
ಬಿಬಿಎಂಪಿ 12 ಸ್ಥಾಯಿ ಸಮಿತಿ ಸ್ಥಾನಗಳಿಗೆ ಶನಿವಾರ ಚುನಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಹನ್ನೆರಡು ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಲಿದೆ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಹನ್ನೆರಡು ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಲಿದೆ.
ಪಾಲಿಕೆ ಕೇಂದ್ರ ಕಛೇರಿ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8.00 ರಿಂದ 9.30 ರವರೆಗೆ ನಾಮಪತ್ರವನ್ನು ಸ್ವೀಕರಿಸಲಾಗುತ್ತದೆ. ನಂತರ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಡಾ. ಎನ್.ವಿ.ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ 11.30 ಗಂಟೆಗೆ ಚುನಾವಣೆ ನಡೆಯಲಿದೆ.
ಇಲ್ಲಿಯವರೆಗೆ ಮೂರು ಬಾರಿ ಸ್ಥಾಯಿ ಸಮಿತಿಗಳ ಚುನಾವಣೆಗೆ ನಿಗದಿಪಡಿಸಿದ್ದರೂ, ಸದಸ್ಯರು ಸಭೆಗೆ ಗೈರಾದ್ದರಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು.
ಆದರೆ, ಈ ಬಾರಿ ಈಗಾಗಲೇ ವಿಪಕ್ಷ ನಾಯಕ ಅಬ್ದುಲ್ ವಾಜಿದ್ ಅವರು ಚುನಾವಣೆಗೆ ಕಾಂಗ್ರೆಸ್ ಸದಸ್ಯರು ಹಾಜರಾಗುವ ಭರವಸೆ ನೀಡಿದ್ದು, ಚುನಾವಣೆ ನಡೆಯುವ ಭರವಸೆ ಮೂಡಿದೆಯೆನ್ನಬಹುದು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ