ಪರೀಕ್ಷಾ ಪೇ ಚರ್ಚಾ ಸಂವಾದ: ರಾಜ್ಯದಿಂದ 42  ವಿದ್ಯಾರ್ಥಿಗಳು ಭಾಗಿ

ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ 'ಪರೀಕ್ಷಾ ಪೇ ಚರ್ಚಾ'. ಸಂವಾದ ಕಾರ್ಯಕ್ರಮಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ.
ನರೇಂದ್ರ  ಮೋದಿ
ನರೇಂದ್ರ ಮೋದಿ
Updated on

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ 'ಪರೀಕ್ಷಾ ಪೇ ಚರ್ಚಾ'. ಸಂವಾದ ಕಾರ್ಯಕ್ರಮಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ.

ದೇಶಾದ್ಯಂತ ವಿವಿಧ ಶಾಲೆಗಳಿಂದ ಆಯ್ದ 2,000 ಹಾಗೂ ರಾಜ್ಯದಿಂದ 42 ವಿದ್ಯಾರ್ಥಿಗಳು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದಿರುವ ಈ ಸಂವಾದ ಕಾರ್ಯಕ್ರಮ ಇದೀಗ ಮೂರನೇ ವರ್ಷದ ಸಂವಾದಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. 

ಸೋಮವಾರ ದೆಹಲಿಯ ತಾಲ್ಕೋಟೋರಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಜರುಗಲಿದೆ.

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳನ್ನು ಪರೀಕ್ಷೆಯ ಭಯದಿಂದ ಪಾರು ಮಾಡುವಲ್ಲಿ  ಈ ಕಾರ್ಯಕ್ರಮ ತಕ್ಕಮಟ್ಟಿಗೆ ಸಫಲವಾಗಿದೆ. 

ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಇರುವ ಆತಂಕ, ಭಯ ಇತ್ಯಾದಿ ಋಣಾತ್ಮಕ ಭಾವನೆಗಳನ್ನು ನೀಗಿಸಿ ಒತ್ತಡರಹಿತವಾಗಿ ಪರೀಕ್ಷಾ ಸವಾಲು ಎದುರಿಸುವ ಕೆಲ ವಿಧಾನಗಳನ್ನು ಪ್ರಧಾನಿ ಮೋದಿ ತಮ್ಮ ಅನುಭವದ ಆಧಾರದ ಮೇಲೆ ತಿಳಿಸಿಕೊಡುತ್ತಾರೆ.

ಜನವರಿ 20, ಸೋಮವಾರ ಬೆಳಗ್ಗೆ 11ಗಂಟೆಯಿಂದ ದೆಹಲಿಯ ತಲಕಟೋರಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶಾದ್ಯಂತ ವಿವಿಧ ಶಾಲೆಗಳಿಂದ ಆಯ್ದ 2,000 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ 42 ವಿದ್ಯಾರ್ಥಿಗಳು ಈ ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ.

ಅದರಂತೆ ಕರ್ನಾಟಕದಿಂದ ಒಟ್ಟು 15 ಸಾವಿರ ವಿದ್ಯಾರ್ಥಿಗಳು ಪ್ರಬಂಧ ಮಂಡನೆ ಮಾಡಿದ್ದರು. ಅವರಲ್ಲಿ 42 ವಿದ್ಯಾರ್ಥಿಗಳನ್ನು ಪರೀಕ್ಷಾ ಪೇ ಚರ್ಚಾಗೆ ಆಯ್ಕೆ ಮಾಡಲಾಗಿದೆ. ಮತ್ತು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಜಂಬಲದಿನ್ನಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ಆಯ್ಕೆಯಾಗಿದ್ದಾರೆ. ಇವರು ಸೇರಿದಂತೆ ಒಟ್ಟು 42 ವಿದ್ಯಾರ್ಥಿಗಳು ಕರ್ನಾಟಕದಿಂದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com