ರಾಷ್ಟ್ರೀಯ ಪಲ್ಸ್ ಪೋಲಿಯೋಗೆ ಚಾಲನೆ ನೀಡಿದ ಶ್ರೀರಾಮುಲು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್​ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್​ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.

ರಾಷ್ಟ್ರೀಯ  ಪಲ್ಸ್​ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಭಾನುವಾರ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ  ರಾಜ್ಯಾದ್ಯಂತ ಪಲ್ಸ್​ ಪೋಲಿಯೊ ಲಸಿಕೆ ಹಾಕಲಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಚಿಕ್ಕಜಾಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ಮಕ್ಕಳ ಜೊತೆಗೂಡಿ ಪಲ್ಸ್​ ಪೋಲಿಯೋ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

ಪ್ರತಿ  ವರ್ಷ ಮುಖ್ಯಮಂತ್ರಿಗಳು ಪಲ್ಸ್​ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದರು.  ಆದರೆ, ಈ ಬಾರಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರು ವಿದೇಶ ಪ್ರವಾಸಕ್ಕೆ  ತೆರಳುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿಗಳ ಬದಲಾಗಿ ಆರೋಗ್ಯ ಸಚಿವ ಶ್ರೀರಾಮುಲು ಲಸಿಕೆ  ಹಾಕಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com