
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರೂ ಡ್ರಗ್ಸ್ ಪ್ಲೆಡರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒರಿಸ್ಸಾ ಮೂಲದ ಮಿಥುನ್ (21) ಹಾಗೂ ಡಿಜೆ ಹಳ್ಳಿಯ ತಬರೇಶ್ (26) ಬಂಧಿತರು. ಬಂಧಿತ ಮಿಥುನ್ ನಿಂದ 2 ಲಕ್ಷ ರೂ ಮೌಲ್ಯದ 6 ಕೆಜಿ 100 ಗ್ರಾಂ ಗಾಂಜಾ ಹಾಗೂ ತಬ್ರೇಶ್ ನಿಂದ 2ಲಕ್ಷ ರೂ ಮೌಲ್ಯದ ಎಂಡಿಎಂಎ, ಮೊಬೈಲ್ ಫೋನ್ , ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಶನಿವಾರರಂದು ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣ ದ ಬಸ್ಸು ನಿಲ್ದಾಣದ ಎದುರಿನ ಪಾರ್ಕಿಂಗ್ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮಿಥುನ್ ಅನ್ನು ಬಂಧಿಸಿದ್ದಾರೆ.
ಅದೇ ದಿನ ಭೈರಸಂದ್ರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನೈಜಿರಿಯಾ ವಾಸಿ ವೈಟ್ ಎಂಬ ವ್ಯಕ್ತಿ ತನ್ನ ಸಹಚರನೊಂದಿಗೆ ಮಾದಕ ವಸ್ತು ಮಾರಾಟ ಮಾಡಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ತಬರೇಶ್ ನನ್ನು ಬಂಧಿಸಿದ್ದಾರೆ.
ಈತ ನೈಜಿರೀಯಾ ದೇಶದ ಡ್ರಗ್ಸ್ ಪೆಡ್ಲರ್ ಜೊತೆಗೆ ಸೇರಿಕೊಂಡು ಈ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement