ಬೆಂಗಳೂರು: ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎಂದು ಆರೋಪಿಸಿ ಮತೀನ್ ಎಂಬಾತನನ್ನು ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಭಾರತೀನಗರ ಠಾಣೆ ಪೊಲೀಸರು ಗುಂಡು ಹಾರಿಸಿ ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.
ಮೊಹ್ಮ್ಮದ್ ರಿಜ್ವಾನ್ (29) ಮತ್ತು ಪರ್ವಜೇ ಅಹಮದ್ (28) ಎಂಬುವರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಭಾರತೀನಗರ ನಿವಾಸಿ ಇರ್ಷಾದ್ ಎಂಬಾತನನ್ನು ಕೆಲವರು ಗಾಂಜಾ ಸೇವನೆ ವಿಚಾರಕ್ಕೆ ಹತ್ಯೆ ಮಾಡಿದ್ದರು. ಆದನ ಪತ್ನಿ ಜೊತೆ ಕೊಲೆಯಾದ ಮೊಹಮ್ಮದ್ ಮತೀನ್ ಅನೈತಿಕ ಸಂಬಂಧ ಹೊಂದಿದ್ದ. ಜೊತೆಗೆ ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ತನ್ನ ಸಹೋದರಿಯನ್ನು ಮತೀನ್ ಜೊತೆಗೆ ಮದುವೆ ಮಾಡಸು ಸಿದ್ಧತೆ ನಡೆಸಿದ್ದಳು. ಈ ವಿಚಾರ ತಿಳಿದ ಇರ್ಷಾದ್ ಸಹೋದರ ಮೊಹಮ್ಮದ್ ರಿಜ್ವಾನ್ ತನ್ನ ಸಹಚರರ ಜೊತೆಗೆ ಸೇರಿ ಜ.16ರಂದು ಮತೀನ್ ನನ್ನು ಶಿವಾಜಿನಗರದಿಂದ ಅಪಹರಿಸಿ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದ.
ಆರೋಪಿಗಳ ಜಾಡು ಬೆನ್ನತ್ತಿದ್ದ ಪೊಲೀಸರು ಮೊಹಮ್ಮದ್ ತಂಜೀಲ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈತನ ಮಾಹಿತಿ ಆಧರಿಸಿ ರಿಜ್ವಾನ್ ಮತ್ತು ಫರ್ವೇಜ್ ಅಡಗಿರುವ ಸ್ಥಳ ಪತ್ತೆ ಹಚ್ಚಿದ್ದರು. ಸೋಮವಾರ ನಸುಕಿನ ಮೂರು ಗಂಟೆ ಸುಮಾರಿಗೆ ಇಬ್ಬರು ಆರೋಪಿಗಳು ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಕಲಪಲ್ಲಿ ಸ್ಮಶಾನದ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಭಾರತೀನಗರ ಇನ್ಸ್ ಪೆಕ್ಟರ್ ಜೆ.ಪಿ.ರಮೇಶ್ ತಮ್ಮ ತಂಡದೊಂದಿಗೆ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದರು. ಈ ವೇಲೆ ಪೇದೆ ಮಜರ್ ಬೇಕ್ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ರಮೇಶ್, ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
Advertisement