ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ರಾಜ್ಯ
ಹೊಸಪೇಟೆ: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
ವಿವಿಧ ಸಮಸ್ಯೆಗಳಿಂದ ಬೇಸತ್ತಿರುವ ಹೊಸಪೇಟೆ ನಗರದ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಹೊಸಪೇಟೆ: ವಿವಿಧ ಸಮಸ್ಯೆಗಳಿಂದ ಬೇಸತ್ತಿರುವ ಹೊಸಪೇಟೆ ನಗರದ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಹೊಸಪೇಟೆ ನಗರದ ಹೊರ ವಲಯದಲ್ಲಿರುವ ಕಾಳಗಟ್ಟ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೆ ತರಗತಿ ಬಹಿಷ್ಕರಿಸಿ ಪ್ರತಿಭಟನೆಗಿಳಿದಿರುವ ಮುರಾರ್ಜಿ ವಸತಿ ಶಾಲೆಯ ವಿಧ್ಯಾರ್ಥಿಗಳು, ಇರುವ ಶಿಕ್ಷಕರಿಂದ ಉತ್ತಮ ಶಿಕ್ಷಣ ಸಿಗುತ್ತಿಲ್ಲ. ಅಂತೆಯೇ ವಸತಿ ಶಾಲೆಯ ಪ್ರಾಂಶುಪಾಲ ಸೇರಿದಂತೆ ಶಾಲೆಯಲ್ಲಿರುವ ಎಲ್ಲಾ ಶಿಕ್ಷಕರನ್ನ ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.
ಅಂತೆಯೇ ಕಳೆದ ಎರಡು ದಿನಗಳಿಂದ ಡಿ.ಒ.ಬಿ.ಸಿ.ಸ್ಥಳಕ್ಕೆ ಬೇಟಿ ನೀಡುವಂತೆ ವಿಧ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ