ಟಿಪ್ಪು ಜಯಂತಿ ರದ್ದು ಆದೇಶ ಪರಿಶೀಲನೆಗೆ 8 ವಾರ ಕಾಲಾವಕಾಶ ತೆಗೆದುಕೊಂಡ ಸರ್ಕಾರ

ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಚರಿಸುತ್ತಿದ್ದ ಟಿಪ್ಪು ಜಯಂತಿ ರದ್ದುಗೊಳಿಸಿ ಕಳೆದ 2019ರ ಜು.30ರಂದು ಹೊರಡಿಸಿದ್ದ ಆದೇಶದ ಮರು ಪರಿಶೀಲನೆಗಾಗಿ ರಾಜ್ಯ ಸರ್ಕಾರ ಹೈಕೋರ್ಟ್ ನಿಂದ ಮತ್ತೆ 8 ವಾರಗಳ ಕಾಲಾವಕಾಶ ಪಡೆದುಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಚರಿಸುತ್ತಿದ್ದ ಟಿಪ್ಪು ಜಯಂತಿ ರದ್ದುಗೊಳಿಸಿ ಕಳೆದ 2019ರ ಜು.30ರಂದು ಹೊರಡಿಸಿದ್ದ ಆದೇಶದ ಮರು ಪರಿಶೀಲನೆಗಾಗಿ ರಾಜ್ಯ ಸರ್ಕಾರ ಹೈಕೋರ್ಟ್ ನಿಂದ ಮತ್ತೆ 8 ವಾರಗಳ ಕಾಲಾವಕಾಶ ಪಡೆದುಕೊಂಡಿದೆ. 

ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ಕೋರಿ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಷಾ, ಟಿಪ್ಪು ಸುತ್ಲಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸೋಮವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಮೆಗೆ ಬಂದಿದ್ದವು. 

ಆಗ ಸರ್ಕಾರಿ ವಕೀಲ ವಿಕ್ರಮ್ ಹುಯಿಲುಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ಅವರು ಸಲ್ಲಿಸಿರುವ ಪ್ರಮಾಣ ಪತ್ರ ಜೊತೆಗಿನ ಮಧ್ಯಂತರ ಅರ್ಜಿಯನ್ನು ನ್ಯಾಯಾಪೀಠಕ್ಕೆ ಒದಗಿಸಿದರು. ಹೈಕೋರ್ಟ್ 2019ರ ನ.6ರಂದು ನೀಡಿ ಮಧ್ಯಂತರ ಆದೇಶದಂತೆ ಟಿಪ್ಪು ಜಂಯತಿ ರದ್ದುಪಡಿಸಿರುವ ಆದೇಶದ ಪರಿಶೀಲನೆಗೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಟಿಪ್ಪು ಕುರಿತು ಸುಮಾರು 300 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಸಾಕಷ್ಟು ಸಾಹಿತ್ಯ ಮತ್ತು ದಾಖಲೆಗಳನ್ನು ಪರಿಶೀಲಿಸಬೇಕಿದೆ. ಎಲ್ಲವನ್ನೂ ಪರಿಶೀಲಿಸಿ ಹೊಸದಾಗಿ ಆದೇಶ ಹೊರಡಿಸಬೇಕಿದೆ. ಅಲ್ಲದೆ, ಇತರೆ ಗಣ್ಯರ ಜಯಂತಿಯ ಬಗ್ಗೆ ವಿವರಗಳನ್ನು ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಆ ಬಗ್ಗೆ ಹಲವು ವರ್ಷಗಳ ಹಿಂದೆ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಅಗಾಧ ದಾಖಲೆ ಪರಿಶೀಲಿಸಲು ಮತ್ತು ಎಲ್ಲಾ ಮಾಹಿತಿ ಸಂಗ್ರಹಿಸಲು 8 ವಾರಗಳ ಕಾಲವಾಕಾಶ ಅಗತ್ಯವಿದ್ದು, ಅಷ್ಟು ಸಮಯ ಮಂಜೂರು ಮಾಡಬೇಕೆಂದು ಮಧ್ಯಂತರ ಅರ್ಜಿಯಲ್ಲಿ ಕೋರಲಾಗಿತ್ತು. 

ಆ ಮನವಿ ಪುರಸ್ಕರಿಸಿದ ನ್ಯಾಯಪೀಠ, ಸರ್ಕಾರಕ್ಕೆ 8 ವಾರ ಕಾಲಾವಕಾಶ ಮಂಜೂರು ಮಾಡಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು. ಅಲ್ಲದೆ, ಮತ್ತೆ ಸಮಯ ಮಂಜೂರು ಮಾಡುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ನ್ಯಾಯಪೀಠ, ಅಷ್ಟರೊಳಗೆ ಸರ್ಕಾರ ನಿರ್ಧಾರ ಕೈಗೊಂಡರೆ ಅದ ಪ್ರತಿ ಅರ್ಜಿದಾರರಿಗೆ ಒದಗಿಸಬೇಕೆಂದು ಹೇಳಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com