
ಬೆಂಗಳೂರು: ಓಂಕಾರ ಆಶ್ರಮ ಮತ್ತು ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿಯ ಗಾಣಕಲ್ಲು ಗ್ರಾಮದ 30 ಗುಂಟೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಎನ್ ಮಂಜುನಾಥ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಹೇಮಂತ್ ಚಂದ್ರಗೌಡರ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಸಲ್ಲಿಸಿದ ಆಕ್ಷೇಪಣೆಗಳ ಹೇಳಿಕೆಯಲ್ಲಿ ಅತಿಕ್ರಮಣವನ್ನು ಬಹಿರಂಗಪಡಿಸಲಾಗಿದೆ.
ಈ ಸಂಬಂಧ ಒತ್ತುವರಿದಾರರಿಗೆ ನೋಟೀಸ್ ಸಹ ನೀಡಲಾಗಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಸರ್ವೆ ಮಾಡುವಾಗ ಒತ್ತುವರಿ ಪತ್ತೆಯಾಗಿದೆ ಎಂದು ಸರ್ಕಾರ ಕೋರ್ಟ್ ಗೆ ವಿವರಿಸಿದೆ,
Advertisement