
ಬೆಂಗಳೂರು: ಇತ್ತೀಚೆಗೆ ವಿದೇಶಿ ಮಹಿಳೆಯೊಬ್ಬರನ್ನು ಕ್ಯಾಬ್ ನಲ್ಲಿ ವಿವಸ್ತ್ರಗೊಳಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕ ಸೇರಿ ಮೂವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಮೂಲದ ಕ್ಯಾಬ್ ಚಾಲಕ ಅಭಿಷೇಕ್ ಬಂಧಿತ ಆರೋಪಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ.
ಜ. 16ರಂದು ಕ್ಯಾಬ್ ಬುಕ್ ಮಾಡಿದ ಉಗಾಂಡಾ ಮೂಲದ ಮಹಿಳೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಆಲಹಳ್ಳಿ ಗ್ರಾಮದ ಬಳಿ ಕ್ಯಾಬ್ ನಲ್ಲಿ ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂಧಿತ್ತು.
ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .
Advertisement