ಇವಿಎಂ ಉತ್ತಮ ನಿರ್ವಹಣೆಗಾಗಿ ಚುನಾವಣಾಧಿಕಾರಿ ವಿ.ರಾಘವೇಂದ್ರಗೆ ರಾಷ್ಟ್ರಪತಿಗಳಿಂದ ವಿಶೇಷ ಪ್ರಶಸ್ತಿ ಪ್ರದಾನ

ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ....
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ ಉಪಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಪ್ರತಿ ವರ್ಷವು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಭಾರತ ಚುನಾವಣಾ ಆಯೋಗವು ಚುನಾವಣಾ ಮತ್ತು ಮತದಾರರ ಪಟ್ಟಿ ನಿರ್ವಹಣೆ ಮತ್ತು ಇದಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಂಸ್ಥೆಗಳಿಗೆ ರಾಷ್ಟ್ರೀಯ ಅತ್ಯುತ್ತಮ ಚುನಾವಣಾ ಕಾರ್ಯಗಳ ಪ್ರಶಸ್ತಿ ನೀಡುತ್ತದೆ.

ಭಾರತ ಚುನಾವಣಾ ಆಯೋಗವು 2019ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿತ್ತು. ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ ಹಾಗೂ ಮತದಾನ ಜಾಗೃತಿಗಾಗಿ ಮಾಧ್ಯಮ ಪ್ರಶಸ್ತಿಗೆ ಬೆಂಗಳೂರಿನ ರೆಡ್ ಎಫ್‍ಎಮ್ ಸಂಸ್ಥೆ ಅತ್ಯುತ್ತಮ ಪ್ರಶಸ್ತಿಗೆ ಭಾಜನವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com