ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ

ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ. 

ಮೃತರನ್ನು ಯಲ್ಲಪ್ಪ, ರಮೇಶ್ ಮತ್ತು ಬಸವರಾಜು ಎಂದು ಗುರುತಿಸಲಾಗಿದೆ. ತಿಪಟೂರಿನಿಂದ ಅರಸೀಕೆರೆ ಕಡೆಗೆ ಸಾರಿಗೆ ಬಸ್ ಹೋಗುತ್ತಿತ್ತು. ಇನ್ನು ಅರಿಸೀಕೆರೆ ಕಡೆಯಿಂದ ತಿಪಟೂರಿಗೆ ಟಾಟಾ ಮ್ಯಾಜಿಕ್ ವಾಹನ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 

ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com