
ಮಂಗಳೂರು: ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಮತ್ತು ಹದಿಹರೆಯದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಸಿದ್ದೀಕ್ (27), ಕೆ.ಮುಹಮ್ಮದ್ (19), ಹನೀಫ್ (25) ಮತ್ತು ಹದಿನಾರು ವರ್ಷದ ಬಾಲಕ ಬಂಧಿತರು. ಬಂಟ್ವಾಳ ತಾಲೂಕಿನಲ್ಲಿ ವಿವಿಧ ಮೊಬೈಲ್ ಸಂಖ್ಯೆಗಳನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡಿ, ಕೋಮು ಸೌಹಾರ್ದತೆಗೆ ಭಂಗ ತಂದ ಆರೋಪ ಅವರ ಮೇಲಿದೆ, ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರೆಲ್ಲರೂ ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement