ಚೆನ್ನಪಟ್ಟಣ: ಬೈಕ್‌ಗೆ ಕಾರು ಡಿಕ್ಕಿ, ಇಬ್ಬರು ದುರ್ಮರಣ

ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು  ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು  ಹೆದ್ದಾರಿಯ ಚೆನ್ನಪಟ್ಟಣ ಬಳಿಯ ಶಿವಳ್ಳಿ ಹೋಟೆಲ್ ಮುಂಭಾಗ ಶುಕ್ರವಾರ ಬೆಳಿಗ್ಗೆ  ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಚೆನ್ನಪಟ್ಟಣ/ಬೆಂಗಳೂರು: ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು  ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು  ಹೆದ್ದಾರಿಯ ಚೆನ್ನಪಟ್ಟಣ ಬಳಿಯ ಶಿವಳ್ಳಿ ಹೋಟೆಲ್ ಮುಂಭಾಗ ಶುಕ್ರವಾರ ಬೆಳಿಗ್ಗೆ  ನಡೆದಿದೆ.

ಚನ್ನಪಟ್ಟಣದ ಸೀನನಹಳ್ಳಿಯ  ರಾಹುಲ್ (18) ಮತ್ತು ಅಭಿಷೇಕ್ (20) ಮೃತಪಟ್ಟವರು. ಗಾಯಗೊಂಡ ಪಾದಚಾರಿ  ಮತ್ತು ಕಾರಿನಲ್ಲಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ  ರವಾನಿಸಲಾಗಿದೆ.

 ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಮಧ್ಯದ ಡಿವೈಡರ್ ಗೆ ಗುದ್ದಿ ಪಕ್ಕದ ರಸ್ತೆಯಲ್ಲಿ  ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com