ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ದೂರು

ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ನಗರದಲ್ಲಿ ಕ್ವಾರಂಟೈನ್​ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಗಾರೆಬಾವಿಪಾಳ್ಯದ ಕೃಷ್ಣ, ಹೊಸಪಾಳ್ಯ ನಿವಾಸಿ ಚಕ್ರಧರ್, ಕೂಡ್ಲುಗೇಟ್ ನೋವೆಲ್ ಟೆಕ್ ಪಾರ್ಕ್ ನ ಗೌತಮ್​ಗೆ ಕ್ವಾರಂಟೈನ್​ಗೆ ಒಳಗಾಗಲು​ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೂ, ಈ ಮೂವರು ಅಧಿಕಾರಿಗಳ ಸೂಚನೆ ಲೆಕ್ಕಿಸದೇ ಮನೆಯಿಂದ ಹೊರಗಡೆ ಹೋಗಿದ್ದರು. ಇದನ್ನು ಗಮನಿಸಿ ತಕ್ಷಣ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ಮೂವರ ಕುಟುಂಬಸ್ಥರಿಗೆ ಸೋಂಕು ತಗುಲಿರುವ ಕಾರಣ ಹೋಂ ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಲಾಗಿತ್ತು. ಆದರೆ, ಇವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಹೋಗಿದ್ದು, ಈ ಬಗ್ಗೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್​​ನಲ್ಲಿ​ ಇದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ‌ ಮಾಡಿದಾಗ ಮೂವರು ಹೊರ ಹೋಗಿರುವುದು ಗೊತ್ತಾಗಿದೆ‌. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಸರ್ಕಾರಿ ಆದೇಶ ಉಲ್ಲಂಘನೆಯಡಿ ಎಫ್ಐಆರ್ ದಾಖಲು‌ ಮಾಡಿ ತನಿಖೆ ಮುಂದುವರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com