ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಕೊರೊನಾ ಸೋಂಕು

ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ 7 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.

ವಿರಾಜಪೇಟೆ ತಾಲೂಕಿನ ಹುಂಡಿ ಗ್ರಾಮದಲ್ಲಿ ಸೋಂಕಿನ 5 ಪ್ರಕರಣಗಳು ಪತ್ತೆಯಾಗಿವೆ. ಹುಂಡಿ ಗ್ರಾಮದ 61 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಇವರು ನೆಲ್ಲಿಹುದಿಕೆರಿ ಸೋಂಕಿತ ವ್ಯಕ್ತಿಯ ಪ್ರಾರ್ಥಮಿಕ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.

ಹುಂಡಿ ಗ್ರಾಮದ 43 ವರ್ಷದ ವ್ಯಕ್ತಿ, 11 ವರ್ಷದ ಬಾಲಕ, 38 ವರ್ಷ ಮತ್ತು 43 ವರ್ಷದ ವ್ಯಕ್ತಿಗಳು ಮತ್ತು ಅದೇ ಗ್ರಾಮದ 29 ವರ್ಷದ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಏತನ್ಮಧ್ಯೆ, ಜಿಲ್ಲೆಯಲ್ಲಿ ಮಾರಣಾಂತಿಕ ಸೋಂಕು ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಎಚ್ಚರಿಕೆ ವಹಿಸಲಾಗಿದೆ. ಇನ್ನು ಹೊಸದಾಗಿ ಸೋಂಕಿತರು ಪತ್ತೆಯಾಗಿರುವ ವಿರಾಜಪೇಟೆ ತಾಲೂಕಿನ ಹುಂಡಿ ಗ್ರಾಮದ ಐವರು, ತಿತಿಮತಿಯ ಒಬ್ಬ ವೃದ್ಧ, ಸೋಮವಾರಪೇಟೆ ತಾಲೂಕಿನ  ಶನಿವಾರಸಂತೆಯ ನಿವಾಸಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com