ಕೋವಿಡ್ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ನಮನ: ಸಿಎಂ ಯಡಿಯೂರಪ್ಪ

ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 

ಪ್ರಸಕ್ತ ಸನ್ನಿವೇಶದಲ್ಲಿ ವೈದ್ಯರ ಸೇವೆ ಅತ್ಯಂತ ಮಹತ್ವಪೂರ್ಣ ಮತ್ತು ಅವಶ್ಯಕ. ನಾಡಿನ ಜನತೆಯ ಆರೋಗ್ಯ ರಕ್ಷಣೆಗೆ ವೈದ್ಯರು ಹಗಲಿರುಳು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಕೋವಿಡ್-19 ಸಮಸ್ಯೆಯ ಸಂದರ್ಭದಲ್ಲಿ ಮಾತ್ರವೇ ಅಲ್ಲದೇ ವರ್ಷಪೂರ್ತಿ ಜನರ ಸ್ವಾಸ್ಥ್ಯಕ್ಕಾಗಿ ತಮ್ಮ ಸೇವೆಯನ್ನು ಮುಡಿಪಾಗಿಟ್ಟ ವೈದ್ಯ ಸಮುದಾಯದ ಕೊಡುಗೆಯನ್ನು ನಾನು ಈ ಸಂಕಷ್ಟದ ಸಮಯದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕೋವಿಡ್-19ನ್ನು ಎದುರಿಸಿ ಜನತೆಗೆ ಭರವಸೆ ಮೂಡಿಸುವ ನಿಟ್ಟಿನಲ್ಲಿ ವೈದ್ಯರು ಯಶಸ್ಸು ಸಾಧಿಸುತ್ತಾರೆನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. 

ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಹಾರ್ದಿಕ ಶುಭಕಾಮನೆಗಳು, ಅನಾರೋಗ್ಯ ಉಂಟಾದಾಗ ಚಿಕಿತ್ಸೆ ನೀಡುವ ವೈದ್ಯರನ್ನು ದೇವರಂತೆ ಕಾಣುತ್ತೇವೆ. ವೈದ್ಯರ ಕರ್ತವ್ಯನಿಷ್ಠೆ. ಪರಿಶ್ರಮ ಮತ್ತು ಸೇವೆಗಳನ್ನು ಸಮಾಜ ಸದಾ ಆದರಿಸುತ್ತದೆ. ಈ ಕೋವಿಡ್ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸೋಣ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com