ವೈದ್ಯರ ನಿಸ್ವಾರ್ಥ ಸೇವೆಯನ್ನು ಎಷ್ಟು ಕೊಂಡಾಡಿದರೂ ಕಡಿಮೆಯೇ: ಬಿ. ಶ್ರೀರಾಮುಲು

ತಮ್ಮ ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು
ಆರೋಗ್ಯ ಸಚಿವ ಬಿ.ಶ್ರೀರಾಮುಲು
Updated on

ಬೆಂಗಳೂರು: ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ.

ವೈದ್ಯರ ದಿನದ ಅಂಗವಾಗಿ ವಿಡಿಯೋ ಹಂಚಿಕೊಂಡಿರುವ ಶ್ರೀರಾಮುಲು, ಕಾನೂನು ಉಳಿಸುವ ವಕೀಲರು, ಜೀವ ಉಳಿಸುವ ವೈದ್ಯರು ದೇವರ ಸಮಾನ. ನಾವೆಲ್ಲರೂ ಅವರನ್ನು ಗೌರವದಿಂದ ನೋಡಬೇಕು ಎಂದು ಹೇಳಿದ್ದಾರೆ. 

'ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯ ಸಮೂಹಕ್ಕೆ ಹಾಗೂ ಅವರಿಗೆ ಬೆಂಬಲ ನೀಡುತ್ತಿರುವ ಕುಟುಂಬ ಸದಸ್ಯರಿಗೆ ಶುಭಾಶಯಗಳು. ದೇಶವನ್ನು ಸೈನಿಕರು ಕಾಯುವಂತೆ ಜನರ ಆರೋಗ್ಯ ಕಾಪಾಡುವ, ಇನ್ನೊಬ್ಬರ ಪ್ರಾಣ ಉಳಿಸುವ ಮಹಾತ್ಕಾರ್ಯದಲ್ಲಿ ತೊಡಗಿರುವ ವೈದ್ಯರ ಶ್ರಮ ಅಮೂಲ್ಯವಾದುದು. ಕರ್ನಾಟಕದ ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿ ಅವಿರತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಮಸ್ತ ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳು. ಜೊತೆಯಾಗಿ ಹೋರಾಡೋಣ, ನಾಡಿನಿಂದ ಕೊರೋನ ತೊಲಗಿಸೋಣ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com