ರಾಜ್ಯ

ಆಸ್ಪತ್ರೆಗಳಲ್ಲಿ ಎದುರಾದ ಹಾಸಿಗೆಗಳ ಕೊರತೆ: ಖಾಸಗಿ ಪ್ರಯೋಗಾಲಯಗಳ ವಿರುದ್ಧ ಬಿಬಿಎಂಪಿ ಆಯುಕ್ತ ಕಿಡಿ

ಆಸ್ಪತ್ರೆಗಳಲ್ಲಿ ಎದುರಾದ ಹಾಸಿಗೆಗಳ ಕೊರತೆ: ಖಾಸಗಿ ಪ್ರಯೋಗಾಲಯಗಳ ವಿರುದ್ಧ ಬಿಬಿಎಂಪಿ ಆಯುಕ್ತ ಕಿಡಿ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಹೊತ್ತಿನಲ್ಲಿ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಜೀವ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಪ್ರಯೋಗಾಲಯಗಳ ಉದ್ಧಟತನದ ವಿರುದ್ಧ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರು ಮಂಗಳವಾರ ತೀವ್ರ ಕಿಡಿಕಾರಿದ್ದಾರೆ. 

ಖಾಸಗಿ ಆಸ್ಪತ್ರೆಗಳು ಸೋಂಕಿತ ವ್ಯಕ್ತಿಗೆ ಕೊರೋನಾ ಕುರಿತು ಮಾಹಿತಿ ನೀಡುವುದಕ್ಕೂ ಮುನ್ನ ಮೊದಲು ಐಸಿಎಂಆರ್ ವೆಬ್'ಸೈಟ್ ನಲ್ಲಿ ಅಪ್'ಲೋಡ್ ಮಾಡಬೇಕು. ಬಿಬಿಎಂಪಿ ಮಾಹಿತಿ ನೀಡಿದ ಬಳಿಕವಷಅಟೇ ರೋಗಿಗಳು ಆಸ್ಪತ್ರೆಗೆ ಬಂದು ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಬೇಕೆಂದು ಆಯುಕ್ತರು ತಿಳಿಸಿದ್ದಾರೆ. 

ಈಗಾಗಲೇ ಖಾಸಗಿ ಆಸ್ಪತ್ರೆಗಳಿಗೆ ನಿಯಮಗಳ ಕುರಿತು ಮಾಹಿತಿ ನೀಡಲಾಗಿದ್ದು, ಸರ್ಕಾರಿ ಸಂಸ್ಥೆಗಳ ವೆಬ್'ಸೈಟ್ ಗಳಿಗೆ ಮಾಹಿತಿ ಅಪ್ಲೋಡ್ ಮಾಡಬೇಕು. ನಂತರ 6 ಗಂಟೆಗಳೊಳಗಾಗಿ ಸೋಂಕಿತ ವ್ಯಕ್ತಿಯನ್ನು ಆತನ ಪರಿಸ್ಥಿತಿಯ ಆಧಾರ ಮೇಲೆ ಸೂಕ್ತ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ. ವ್ಯಕ್ತಿ ಆರೋಗ್ಯಸ್ಥಿತಿಯನ್ನು ಆಧರಿಸಿ ನಾವು ಕೊರೋನಾ ಕೇರ್ ಸೆಂಟರ್ ಅಥವಾ ಕೊರೋನಾಗೆ ನಿಯೋಜಿಸಲಾಗಿರುವ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಇದರಿಂದ ಕೊರೋನಾ ಇರುವ, ಲಕ್ಷಣ ರಹಿತ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಹಾಸಿಕೆ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ವೈರಸ್'ನಿಂದ ಮೃತಪಟ್ಟವರ ಮೃತದೇಹವನ್ನು ಸ್ವೀಕರಿಸಲು ಕೆಲ ಕುಟುಂಬಸ್ಥರು ನಿರಾಕರಿಸುತ್ತಿದ್ದಾರೆ. ಹೀಗಾಗಿ ಮೃತಪಟ್ಟವರ ಅಂತ್ಯ ಸಂಸ್ಕಾರ ನೆರವೇರಿಸಲು ವ್ಯಕ್ತಿ ಕುಟುಂಬದ ನಾಲ್ವರು ಸದಸ್ಯರಿಗೆ ಪಿಪಿಇ ಕಿಟ್ ಗಳನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.