ಬಳ್ಳಾರಿಯಲ್ಲಿ ಕೋವಿಡ್-19 ರೋಗಿಗಳ ಶವ ಎಸೆತ: ಸಿಎಂ ಯಡಿಯೂರಪ್ಪ ವಿಷಾದ

ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ಘಟನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Updated on

ಬೆಂಗಳೂರು: ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ಘಟನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

ಕೋವಿಡ್ ನಿಯಂತ್ರಣ ಸಂಬಂಧ ತಜ್ಞ ವೈದ್ಯರೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಬೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಬಳ್ಳಾರಿಯಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಘಟನೆ ಸಂಬಂಧ ಆರು ಮಂದಿಯನ್ನು ಸೇವೆಯಂದ ಅಮಾನತುಗೊಳಿಸಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳು ತನಿಖೆ ನಡೆಸುವಂತೆ ಸೂಚಿಸಿದ್ದಾರೆ, ಸೋಂಕಿತರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾಡಳಿತವು ಘಟನೆ ಕುರಿತು ಕ್ಷಮೆಯಾಚಿಸಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ಅಮಾನವೀಯ ಘಟನೆಗಳಿಗೆ ಅಧಿಕಾರಿಗಳು ಆಸ್ಪದ ನೀಡಬಾರದು ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com