

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಮೂವರು ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 76ಕ್ಕೇರಿದೆ.
ಈ ಹಿಂದೆ ಸೋಂಕು ದೃಢಪಟ್ಟ ಮಡಿಕೇರಿಯ ಆಸ್ಪತ್ರೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಮೂರ್ನಾಡುವಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 49 ವರ್ಷದ ಪುರುಷ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿಯ ಮಹದೇವಪೇಟೆಯ ಚೌಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ವಾಸವಿರುವ 27 ವರ್ಷದ ಪುರುಷ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಕಳೆದೊಂದು ವಾರದಿಂದ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಗಣನೀಯ ಸಂಖ್ಯೆಯಲ್ಲಿ ಕೊರೋನಾ ಕೇಸುಗಳು ದಾಖಲಾಗುತ್ತಿದೆ. ಎಲ್ಲಿಯೂ ಕೊರೋನಾ ವೈರಸ್ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇನ್ನೂ ಕರ್ನಾಟಕದಲ್ಲೂ ಕೊರೋನಾ ಆರ್ಭಟ ಮುಂದುವರಿದೆ. ಈ ರಾಜ್ಯಗಳಂತೆಯೇ ದೇಶಾದ್ಯಂತ ಕೊರೋನಾ ಹಾವಳಿಗೆ ಜನ ತತ್ತರಿಸಿ ಹೋಗಿದ್ಧಾರೆ.