ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ!

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಬರುವ 7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನಿಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಬರುವ 7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನಿಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಯಾದಿಗರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com