ಸಂಗ್ರಹ ಚಿತ್ರ
ರಾಜ್ಯ
ಸೀಲ್ಡೌನ್ ಪ್ರದೇಶದಲ್ಲಿರುವ ಸಚಿವಾಲಯದ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲು ಅವಕಾಶ
ಸೀಲ್'ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಶನಿವಾರ ಅನುಮಂತಿ ನೀಡಿದೆ.
ಬೆಂಗಳೂರು: ಸೀಲ್'ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಶನಿವಾರ ಅನುಮಂತಿ ನೀಡಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೀಗಾಗಿ ವಿಧಾನಸೌಧ, ವಿಕಾಸಸೌಢ, ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸೀಲ್ಡೌನ್ ಪ್ರದೇಶದಲ್ಲಿದ್ದರೆ ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದೆ.
ಸಿಬ್ಬಂದಿಯೊಬ್ಬರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ವಾರ ವಿಧಾನಸೌಧ ಹಾಗೂ ವಿಕಾಸಸೌಧವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿತ್ತು. ಈ ವೇಳೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಸ್ಯಾನಿಟೈಸ್ ಕಾರ್ಯ ನಡೆಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ