ಕೊರೋನಾ: ಇಂದು ರಾಜ್ಯದಾದ್ಯಂತ ಸಂಡೇ ಲಾಕ್'ಡೌನ್, ನಾಳೆ ಬೆಳಿಗ್ಗೆ 5ರವರೆಗೆ ಎಲ್ಲಾ ಚಟುವಟಿಕೆಗಳೂ ಸ್ತಬ್ಧ

ರಾಜ್ಯದಲ್ಲಿ ಕೊರೋನಾ ಸೋಂಕು ಕೈಮೀರುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಇಡೀ ರಾಜ್ಯ ಭಾನುವಾರ ಸಂಪೂರ್ಣ ಸ್ಥಗಿತಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಕೈಮೀರುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಇಡೀ ರಾಜ್ಯ ಭಾನುವಾರ ಸಂಪೂರ್ಣ ಸ್ಥಗಿತಗೊಂಡಿದೆ. 

ಶನಿವಾರ ರಾತ್ರಿ 8ಗಂಟೆಯಿಂದಲೇ ಪ್ರಾರಂಭವಾಗಿರುವ ಲಾಕ್'ಡೌನ್ ಸತತ 33 ಗಂಟೆಗಳ ಕಾಲ ಇಡೀ ರಾಜ್ಯದಲ್ಲಿ ಜಾರಿಯಲ್ಲಿರಲಿದ್ದು, ವ್ಯಾಪಾರ-ವಹಿವಾಟು ಸ್ತಬ್ಧವಾಗಲಿದೆ. ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಇನ್ನುಳಿದ ಯಾವುದೇ ಚಟುವಟಿಕೆಗಳು ಸೋಮವಾರ ಬೆಳಿಗ್ಗೆ 5ರವರೆಗೂ ನಡೆಯುವುದಿಲ್ಲ.

ಈ ಮಾದರಿಯ ಲಾಕ್'ಡೌನ್ ಇನ್ನು ಒಂದು ತಿಂಗಳ ಕಾಲ ಮುಂದುವರೆಯಲಿದೆ. ಲಾಕ್'ಡೌನ್ ವೇಳೆ ಹಾಲು, ತರಕಾರಿ, ಹಣ್ಣು, ಔಷಧ, ಮಾಂಸದ ಅಂಗಡಿ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ಮದ್ಯದಂಗಡಿ, ಟ್ಯಾಕ್ಸಿ, ಆಟೋ, ಬಿಎಂಟಿಸಿ, ಕೆಎಸ್ಆರ್'ಟಿಸಿ ಬಸ್, ದೇವಾಲಯಗಳು ಸೇರಿ ಅನಗತ್ಯ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ. 

ಈಗಾಗಲೇ ಚಾಲ್ತಿಯಲ್ಲಿರುವ ರಾತ್ರಿ ಕರ್ಫ್ಯೂನಿಂದಾಗಿ ಶನಿವಾರ ರಾತ್ರಿ 8ಗಂಟೆಯ ಬಳಿಕ ಅಗತ್ಯ ಸೇವೆ ಹೊರತುಪಡಿಸಿ ಜನಸಂಚಾರ ಸೇರಿ ಎಲ್ಲಾ ರೀತಿಯ ಸಂಚಾರಗಳಿಗೆ ಕಡಿವಾಣ ಹಾಕಲಾಗಿದೆ. ಶನಿವಾರ ರಾತ್ರಿಯಿಂದಲೇ ಕೆಎಸ್ಆರ್'ಟಿಸಿ, ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸೇವೆ ಅಲಭ್ಯವಾಗಿರಲಿದೆ. 

ಲಾಕ್'ಡೌನ್ ಪರಿಣಾಮ ತುರ್ತು ವಾಹನಗಳ ಓಡಾಟ ಬಿಟ್ಟು ಇನ್ನುಳಿದ ಎಲ್ಲಾ ರೀತಿಯ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಅನಗತ್ಯ ಓಡಾಟ ನಡೆಸಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸೂಚನೆ ನೀಡಲಾಗಿದೆ,. 

ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ ಸೇರಿದಂತೆ ನೆರೆ ರಾಜ್ಯಗಳ ಗಡಿಯನ್ನು ಕೂಡ ಬಂದ್ ಮಾಡಲಾಗುವುದು. ಪೊಲೀಸರು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಹೊರರಾಜ್ಯಗಳಇಂದ ಒಳಬರುವ ಮತ್ತು ಹೊರ ಹೋಗುವ ಜನರಿಗೆ ನಿಷೇಧ ಹೇರಲಾಗಿದ್ದಾರೆ. 

ಅಲ್ಲದೆ, ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಕಮಿಷನರೇಟ್ ಮತ್ತು ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ರಾಜ್ಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇತ್ತೀಚೆಗೆ ತಜ್ಞರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿದ್ದರು. ಅವರ ಸಲಹೆ ಆಧರಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಸಚಿವರೊಂದಿಗೆ ಸಭೆ ನಡೆಸಿ ಪ್ರತಿ ಭಾನುವಾರ ಲಾಕ್ಡೌನ್ ಮಾಡುವ ಬಗ್ಗೆ ನಿರ್ಧಾರ ಗಳನ್ನು ಕೈಗೊಳ್ಳಲಾಯಿತು. ಸೋಂಕು ತಡೆಯುವ ಸಂಬಂಧ ಮೇ ತಿಂಗಳಲ್ಲಿ 1 ಭಾನುುವಾರ ಲಾಕ್'ಡೌನ್ ಮಾಡಲಾಗಿತ್ತು. ಇದೀಗ ಮತ್ತೆ ಲಾಕ್'ಡೌನ್ ಮಾಡಲು ಸರ್ಕಾರ ನಿರ್ಣಯಕೈಗೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com