ಬೆಂಗಳೂರಿನಲ್ಲಿ ಮತ್ತೋರ್ವ ಎಎಸ್ಐ ಕೋವಿಡ್-19 ಗೆ ಬಲಿ

ಸಿಲಿಕಾನ್ ಸಿಟಿಯ‌ ಮತ್ತೋರ್ವ ಕೊರೊನಾ ವಾರಿಯರ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಸಿಲಿಕಾನ್ ಸಿಟಿಯ‌ ಮತ್ತೋರ್ವ ಕೊರೊನಾ ವಾರಿಯರ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ನಗರದ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 57 ವರ್ಷದ ಎಎಸ್ ಐ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. 

ಕಳೆದ ಮೂರು ದಿನಗಳ ಹಿಂದೆ ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಉಸಿರಾಟ ಸಮಸ್ಯೆ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಪೊಲೀಸರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೊಲೀಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸೇರಿ ಮೃತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಮತ್ತಷ್ಟು ಆತಂಕ ಸೃಷ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com