ಭಾನುವಾರದ ಲಾಕ್ ಡೌನ್ ಯಶಸ್ವಿ: ಬೆಂಗಳೂರು ಜನತೆಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಭಾನುವಾರದ ಲಾಕ್​ಡೌನ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿಗರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಭಾಸ್ಕರ್ ರಾವ್
ಭಾಸ್ಕರ್ ರಾವ್
Updated on: 

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಭಾನುವಾರದ ಲಾಕ್​ಡೌನ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿಗರಿಗೆ ಧನ್ಯವಾದ ಅರ್ಪಿಸಿದ್ದಾರೆ.

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸುನಾಮಿ ಸ್ಫೋಟಕ್ಕೆ ಬ್ರೇಕ್ ಹಾಕಲು ಸಂಡೇ ಲಾಕ್‍ಡೌನ್ ಅಸ್ತ್ರಕ್ಕೆ ಜನರಿಂದ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ಹಂತದಲ್ಲಿ ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಸರ್ಕಾರ ಆದೇಶಿಸಿದ್ದ ಫಸ್ಟ್ ಸಂಡೇ ಲಾಕ್‍ಡೌನ್ ಇಂದು ಬೆಳಗ್ಗೆ 5 ಗಂಟೆಗೆ ಯಶಸ್ವಿಯಾಗಿ ಅಂತ್ಯವಾಗಿದೆ. ಈ ಹಿಂದಿನ ಲಾಕ್‍ಡೌನ್‍ಗಳಿಗೆ ಹೋಲಿಸಿದರೆ 33 ಗಂಟೆಗಳ ಸಂಡೇ ಲಾಕ್‍ಡೌನ್‍ಗೆ ಜನ ಸಹಕರಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಆಯುಕ್ತರು, 36 ಗಂಟೆಗಳ ಲಾಕ್ ಡೌನ್​​ಗೆ ತಾವು ಉತ್ತಮ ಪ್ರತಿಕ್ರಿಯೆ ನೀಡಿದ್ದೀರಾ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. 'ರಾಜ್ಯದಲ್ಲಿ ಮೊದಲ ಸಂಡೇ ಲಾಕ್‍ಡೌನ್ ಯಶಸ್ವಿಯಾಗಿ ಅಂತ್ಯವಾಗಿದೆ. ಸಂಡೇ ಲಾಕ್‍ಡೌನ್ ಅನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಜನರಿಗೆ ಧನ್ಯವಾದ ತಿಳಿಸಿದ್ದಾರೆ. “36 ಗಂಟೆಗಳ ಲಾಕ್‍ಡೌನ್ ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರಿ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ “ಇನ್ನು ಮುಂದೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ನಮಗೆ ನಾವೇ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕು. ನಿಮಗೆ ಏನೇ ಸಮಸ್ಯೆಯಾದಲ್ಲಿ 100 ನಂಬರಿಗೆ ಫೋನ್ ಮಾಡಿ. ತಕ್ಷಣ ನಿಮ್ಮ ಪಕ್ಕದಲ್ಲಿರುವ ಹೊಯ್ಸಳ ಅವರು ಬಂದು ಸ್ಪಂದಿಸುತ್ತಾರೆ” ಎಂದು ಜನತೆಗೆ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com