ರಾಜ್ಯದಲ್ಲಿ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ, ವಾರ್ ರೂಮ್ ಹರಸಾಹಸ!

ರಾಜ್ಯದಲ್ಲಿ ಪ್ರತೀನಿತ್ಯ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ ಅಧಿಕಾರಿಗಳು, ವಾರ್ ರೂಂ ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಪ್ರತೀನಿತ್ಯ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ ಅಧಿಕಾರಿಗಳು, ವಾರ್ ರೂಂ ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಕೋವಿಡ್ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, ಕಳೆದ 5 ದಿನಗಳಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳೊಂದಿನ ಸಂಪರ್ಕಿತರ ಪತ್ತೆಹಚ್ಚುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಹೇಳಿಕೆಯನ್ನು ಬಿಬಿಎಂಪಿ ಅಧಿಕಾರಿಗಳು ತಳ್ಳಿಹಾಕುತ್ತಿದ್ದಾರೆ. 

ಇದು ಸುಳ್ಳು. ಯಾವುದೇ ಸಮಯದಲ್ಲಿ ಯಾವುದೇ ಸಂದರ್ಭದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಕುರಿತು ಮಾಹಿತಿ ಸಂಗ್ರಹಿಸುತ್ತಾರೆ. ಹೆಚ್ಚೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಹೆಚ್ಚೆಚ್ಚು ಮಾಹಿತಿಗಳು ಸಂಗ್ರಹವಾಗುತ್ತಿವೆ. ಹೀಗಾಗಿ ಎಲ್ಲವನ್ನೂ ವೆಬ್'ಸೈಟ್ ಗಳಲ್ಲಿ ಅಪ್ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಂಕಿತರೊಂದಿಗೆ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದೇ ಭಾಸವಾಗುತ್ತೆದ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರು ಹೇಳಿದ್ದಾರೆ. 

ಇನ್ನು ಬಿಬಿಎಪಿ ಹಿರಿಯ ಅಧಿಕಾರಿಗಳು ಹಾಗೂ ಕೋವಿಡ್ ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಒಪ್ಪಿಕೊಂಡಿದ್ದಾರೆ. 

ಕಳೆದ 5 ದಿನಗಳಿಂದ ನಗರದಲ್ಲಿ 700-1250 ಪ್ರಕರಣಗಳು ಪ್ರತೀನಿತ್ಯ ಬೆಳಕಿಗೆ ಬರುತ್ತಿವೆ. ಪ್ರತೀನಿತ್ಯ ಆರೋಗ್ಯಾಧಿಕಾರಿಗಳು 5.000 ಸ್ವ್ಯಾಬ್ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. 

ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಕಂದಾಯ ಇನ್ಸ್ ಪೆಕ್ಟರ್ ಗಳನ್ನೊಳಗೊಂಡಂತೆ 200 ತಂಡಗಳನ್ನು ರಚಿಸುತ್ತಿದ್ದು, ಈ ತಂಡಗಳು ವಾರ್ಡ್ ಮಟ್ಟದಲ್ಲಿ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದೆ ಎಂದು ತಿಳಿದುಬಂದಿದೆ. 

ಫೀಲ್ಡ್ ವರ್ಕರ್ಸ್ ಗಳಿಗೆ ವಾರಗಳ ಕಾಲ ತರಬೇತಿ ನೀಡಲಾಗುತ್ತಿದ್ದು, ಮಾಹಿತಿಯನ್ನು ಹೇಗೆ ಸಂಗ್ರಹಿಸಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತಿದೆ. 5,000 ಪ್ರಕರಣಗಳಲ್ಲಿ 2,500 ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ. ಮತ್ತಷ್ಟು ಸಂಪರ್ಕಿತರ ಪತ್ತೆಹಚ್ಚುವ ಅಗತ್ಯವಿದೆ. ಆದರೆ, ಸಂಪರ್ಕಿತರ ಪತ್ತೆಹಚ್ಚುವುದು ಕಠಿಣ ಕೆಲಸವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com