ತಹಸೀಲ್ದಾರ್ ಹತ್ಯೆ: 25 ಲಕ್ಷ ರೂ. ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಮುಖ್ಯಮಂತ್ರಿ ಆದೇಶ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿದ್ದು, ಈ ಸಂಬಂಧ  ಸರ್ಕಾರಿ ನೌಕರರಿಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ತಹಸೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ
ತಹಸೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ

ಬೆಂಗಳೂರು: ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿರುವ ಕೋಲಾರ ಜಿಲ್ಲೆ ಬಂಗಾರ ಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರ ಮೌಳೇಶ್ವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ  ನೆರವೇರಿಸಬೇಕು  ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಪರಿಹಾರ  ಹಾಗೂ ಬಿ.ಕೆ.ಚಂದ್ರಮೌಳೇಶ್ವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡಲು  ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಆರೋಪಿಗಳ ವಿರುದ್ಧ  ಕಾನೂನಿನಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com