ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು 

ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.
ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು 
Updated on

ಮಂಗಳೂರು:  ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಜುಲೈ 9 ರ ಗುರುವಾರ ಬಂಟ್ವಾಳದ ಚೆನ್ನೈತೋಡಿ ಎಂಬಲ್ಲಿ ಮಮತಾ ಗಟ್ಟಿ ಎಂಬ ಆಶಾ ಕಾರ್ಯಕರ್ತೆ ಮೇಲೆ ಕಾಂತಪ್ಪ ಪೂಜಾರಿ ಎಂಬ ಆರೋಪಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ, 

ಹಲ್ಲೆಗೊಳಗಾದ ಮಮತಾ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು  ಈ ಸಂಬಂಧ ವಾಮದಪದವು ಸಮುದಾಯದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ  ದೂರು ದಾಖಲಿಸಿದ್ದಾರೆ.

ವೈದ್ಯಕೀಯ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಪಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com