ಸಿದ್ದರಾಮಯ್ಯ
ರಾಜ್ಯ
ತಹಶೀಲ್ದಾರ್ ಹತ್ಯೆ: ಸಿದ್ದರಾಮಯ್ಯ ಖಂಡನೆ,ಕಠಿಣ ಕ್ರಮಕ್ಕೆ ಆಗ್ರಹ
ಸರ್ವೇ ಕಾರ್ಯಕ್ಕೆ ತೆರಳಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು: ಸರ್ವೇ ಕಾರ್ಯಕ್ಕೆ ತೆರಳಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತಹಶೀಲ್ದಾರ್ ಹತ್ಯೆ ಆಘಾತಕಾರಿ ವಿಚಾರ ಎಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದ್ದಾರೆ.ಈ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ,ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸರ್ಕಾರವನ್ನು ಆಗ್ರಹಿಸುವುದಾಗಿ ಹೇಳಿದ್ದಾರೆ.