ದೇಶದಲ್ಲೇ ಅತೀದೊಡ್ಡ ಕೋವಿಡ್ ಆಸ್ಪತ್ರೆ ಬೆಂಗಳೂರಿನಲ್ಲಿ: 10,100 ಹಾಸಿಗೆಯುಳ್ಳ ಆರೈಕೆ ಕೇಂದ್ರ ವಾರದಲ್ಲಿ ಕಾರ್ಯಾರಂಭ

ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ 10,100 ಹಾಸಿಗೆ ಸಾಮರ್ಥ್ಯದ ದೇಶದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ವಾರದಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಅತೀದೊಡ್ಡ ಕೋವಿಡ್ ಆಸ್ಪತ್ರೆ
ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಅತೀದೊಡ್ಡ ಕೋವಿಡ್ ಆಸ್ಪತ್ರೆ
Updated on

ಬೆಂಗಳೂರು: ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ 10,100 ಹಾಸಿಗೆ ಸಾಮರ್ಥ್ಯದ ದೇಶದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ವಾರದಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ನಿನ್ನೆಯಷ್ಟೇ ಬಿಐಇಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೀದೊಡ್ಡ ಕೋವಿಡ್ ಕೇರ್ ಕೇಂದ್ರದಲ್ಲಿ ಸೋಂಕಿತರ ನಿರ್ವಹಣೆಗೆ ವೈದ್ಯರು, ನರ್ಸ್'ಗಳು ಸೇರಿದಂತೆ 2200 ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಐಇಸಿಯಲ್ಲಿ 10,100 ಹಾಸಿಗೆ ಸೌಲಭ್ಯದ ಕೋವಿಡ್ ನಿಗಾ ಕೇಂದ್ರ ಸ್ಥಾಪಿಸಲಾಗುತ್ತಿದೆ. ಇನ್ನು ಒಂದು ವಾರದಲ್ಲಿ ಕೇಂದ್ರ ಸಂಪೂರ್ಣ ಸಿದ್ಧವಾಗಲಿದೆ. ಪ್ರತಿ 100 ರೋಗಿಗೆ ಒಬ್ಬ ವೈದ್ಯ, ಇಬ್ಬರು ನರ್ಸ್, ಒಬ್ಬ ಸಹಾಯಕ, ಒಬ್ಬ ಸ್ವಚ್ಛತಾ ಸಿಬ್ಬಂದಿ ಮತ್ತು ಇಬ್ಬರು ಮಾರ್ಷಲ್ ಗಳು ಸೇರಿದಂತೆ ಒಟ್ಟು 2200 ಸಿಬ್ಬಂದಿ ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. 

ಯಾವುದೇ ಸೋಂಕು ಲಕ್ಷಣಗಳಿಲ್ಲದ ಹಾಗೂ ಅತೀ ಕಡಿಮೆ ಲಕ್ಷಣಗಳಿರುವ ಸೋಂಕಿತರನ್ನು ಮಾತ್ರ ಈ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಇಲ್ಲಿ ಸೋಂಕಿತರ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯ, ಐಸಿಯು ಚಿಕಿತ್ಸಾ ಘಟಕ, ಇಸಿಜಿ, ಆಕ್ಸಿಜನ್ ಸೌಲಭ್ಯವಿರಲಿದೆ. ಸಮೀಪದ ಆಸ್ಪತ್ರೆಯೊಂದಿಗೆ ಸಂಯೋಜನೆ ಮಾಡಿಕೊಂಡು ದಿನದ 24 ಗಂಟೆಯೂ ಸೋಂಕಿತರ ಮೇಲ್ವಿಚಾರಣೆ ನಡೆಸುವ ಕೊಠಡಿ ಸ್ಥಾಪಿಸಿದೆ. ಇಲ್ಲಿನ ವೈದ್ಯಕೀಯ ಮತ್ತು ಇತರೆ ತ್ಯಾಜ್ಯ ವಿಂಗಡಣೆ ಮತ್ತು ವಿಲೇವಾರಿ ಸೋಂಕಿತರ ಬೆಡ್'ಶೀಟ್, ಬ್ಲಾಂಕೆಟ್ ತೊಳೆಯಲು ಲಾಂಡ್ರಿ ವ್ಯವಸ್ಥೆ ಇದೆ. ಜೊತೆಗೆ ಮನೋರಂಜನೆಗಾಗಿ ಟೀವಿ, ಇಂಟರ್ನೆಟ್ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com