ಕೋವಿಡ್ -19: ಮೈಸೂರಿನ ಹೊರವಲಯದಲ್ಲಿ 600 ಹಾಸಿಗೆಗಳ ಆಸ್ಪತ್ರೆ ಸಿದ್ಧ
ಮೈಸೂರು: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶೈಕ್ಷಣಿಕ ಭವನದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕೋವಿಡ್ ಆಸ್ಪತ್ರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆ ಕಟ್ಟಡ 55 ಕೊಠಡಿಗಳನ್ನು ಹೊಂದಿದ್ದು ಸುಮಾರು 600 ಹಾಸಿಗೆಗಳ ಸಾಮರ್ಥ್ಯವಿದೆ. ಕಟ್ಟಡವು ಎಲ್ಲಾ ಮೂಲ ಸೌಲಭ್ಯಗಳನ್ನು ಹೊಂದಿದ್ದು, ಪ್ರತಿ ಕೋಣೆಯಲ್ಲಿ ಕೇಬಲ್ ಟಿವಿ ಸಂಪರ್ಕ, ವೈ-ಫೈ ಮೂಲಕ ಇಂಟರ್ ನೆಟ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.
ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗವನ್ನು ಒದಗಿಸಲಾಗಿದೆ. ಅಲ್ಲದೆ, ಒಳಾಂಗಣ ಕ್ರೀಡೆಯ ಸೌಲಭ್ಯಗಳನ್ನು ಸಹ ಒದಗಿಸಲಾಗುವುದು. ಪ್ರತಿ 100 ರೋಗಿಗಳಿಗೆ ಇಬ್ಬರು ಶುಶ್ರೂಷಕಿಯರು ಮತ್ತು ಕರ್ತವ್ಯ ವೈದ್ಯರನ್ನು ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮೈಸೂರು ಮತ್ತು ಬೆಂಗಳೂರು ನಡುವೆ ವಾಹನ ಸಂಚಾರವನ್ನು ನಿಷೇಧಿಸುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಬೆಂಗಳೂರಿಗೆ ಪ್ರಯಾಣಿಸಿ ಹಿಂದಿರುಗಿ ಬಂದವರಲ್ಲಿ ಪ್ರಕರಣಗಳು ಕಂಡುಬಂದಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ