ಕಚೇರಿ ಸಿಬ್ಬಂದಿಗೆ ಕೊರೋನಾ ಹಿನ್ನೆಲೆ ಕ್ವಾರಂಟೈನ್: ನಾನು ಆರೋಗ್ಯವಾಗಿದ್ದೇನೆ, ಚಿಂತೆ ಬೇಡ ಎಂದ ಸಿಎಂ ಯಡಿಯೂರಪ್ಪ

ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

ತಮ್ಮ ಆರೋಗ್ಯ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಚೇರಿಯ ಸಿಬ್ಬಂದಿಗಳಲ್ಲಿ ಕೊರೋನಾ ಪತ್ತೆಯಾಗಿದೆ. ಹೀಗಾಗಿ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆಂದು ಹೇಳಿದ್ದಾರೆ. 

ನಾನು ಆರೋಗ್ಯವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೋನಾ ನಿಯಂತ್ರಣಕ್ಕೆ ಸಹಕಾರ ನೀಡಿ ಎಂದು ರಾಜ್ಯದ ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com