ಬೆಂಗಳೂರು: ಕೊಪ್ಪಳ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು
ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಅನುಕರಣೀಯ ಸಾಧನೆ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ಅಭಿನಂದನೆ ಸಲ್ಲಿಸುವುದಾಗಿ ಸಚಿವರು ಟ್ವೀಟ್ ಮಾಡಿದ್ದಾರೆ.
ನೆರೆಯ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿರುವುದಾಗಿ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
Advertisement