ಕೋವಿಡ್-19 ಮಧ್ಯೆ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ- ಪ್ರಹ್ಲಾದ್ ಜೋಷಿ

ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ಲಹ್ಲಾದ್ ಜೋಷಿ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
Updated on

ಹುಬ್ಬಳ್ಳಿ: ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ಲಹ್ಲಾದ್ ಜೋಷಿ ಹೇಳಿದ್ದಾರೆ.

ಮುಂಗಾರು ಅಧಿವೇಶನ ಖಂಡಿತವಾಗಿಯೂ ನಡೆಯಲಿದೆ. ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು. 

ಮಾರ್ಚ್ ತಿಂಗಳಲ್ಲಿ ಲೋಕಸಭೆಯಲ್ಲಿ 15 ರಾಜ್ಯಸಭೆಯಲ್ಲಿ 13 ಮಸೂದೆಗಳು ಅನುಮೋದನೆಗೊಂಡಿವೆ. ಈ ಅಧಿವೇಶನದಲ್ಲಿ ಎರಡು ಸದನಗಳಲ್ಲಿ 19 ಮಸೂದೆಗಳನ್ನು ಅನುಮೋದನೆಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುಗಮ ಕಲಾಪ ನಡೆಸುವ ನಿಟ್ಟಿನಲ್ಲಿ ಲೋಕಸಭೆ ಸ್ಪೀಕರ್  ಓಂ ಬಿರ್ಲಾ ಹಾಗೂ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ವಿಸ್ತೃತ ಸಭೆ ನಡೆಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com