ಕೊರೋನಾ ವೈರಸ್ ಲಾಕ್ಡೌನ್: ಸಚಿವಾಲಯದ ಸಿಬ್ಬಂದಿ ಹಾಜರಾತಿಗೆ ವಿನಾಯಿತಿ

ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ವಿಧಾನಸಭೆ ಸಚಿವಾಲಯದ ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.
ವಿಧಾನಸೌಧ
ವಿಧಾನಸೌಧ
Updated on: 

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ವಿಧಾನಸಭೆ ಸಚಿವಾಲಯದ ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.

ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಸಚಿವಾಲಯದ ಸಿಬ್ಬಂದಿಗೆ ಜು 15 ರಿಂದ 21 ರ ವರೆಗೆ ಕಚೇರಿಗೆ ಹಾಜರಾಗಲು ವಿನಾಯಿತಿ ನೀಡಿದ್ದು, ತುರ್ತು ಹಾಗೂ ಬಾಕಿ ಇರುವ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕು. ಮನೆಯಿಂದಲೇ ಕೆಲಸ ಮಾಡಲೂ ಅವಕಾಶ ಕಲ್ಪಿಸಲಾಗಿದ್ದು, ಆದರೆ, ಬೆಂಗಳೂರು ಕೇಂದ್ರ ಸ್ಥಾನ ಬಿಟ್ಟು ಹೊರಗಡೆ ಹೋಗದಂತೆ ಸೂಚಿಸಲಾಗಿದೆ. ಅಲ್ಲದೆ ಮೇಲಾಧಿಕಾರಿಗಳು ಸೂಚನೆ ನೀಡಿದಾಗ ಕಚೇರಿಗೆ ಹಾಜರಾಗುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com